ಕೆ. ವಿ. ಸುಬ್ಬಣ್ಣಜೀವನಕೆ.ವಿ.ಸುಬ್ಬಣ್ಣನವರ ಹುಟ್ಟೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೆಗ್ಗೋಡು. ೧೯೩೨ ಫೆಬ್ರವರಿ ೨೦ ರಂದು ಜನಿಸಿದ ಇವರು ಮುಂದೆ ಹೆಗ್ಗೋಡಿನಂತಹ ಚಿಕ್ಕ ಊರಿನಲ್ಲಿದ್ದುಕೊಂಡೇ ನೀಲಕಂಠೇಶ್ವರ ನಾಟ್ಯಸೇವಾ ಸಂಘ (ನೀನಾಸಂ) ರಂಗ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಗಮನ ಸೆಳೆದರು. ಈ ಮೂಲಕ ಗ್ರಾಮೀಣ ರಂಗಭೂಮಿಗೆ ತನ್ನದೇ ಆದ ಸ್ಥಾನ, ಪ್ರತಿಷ್ಠೆಗಳನ್ನು ತಂದುಕೊಟ್ಟರು. ನೀನಾಸಂ ಸಂಸ್ಥೆ ನಡೆಸುವ ತಿರುಗಾಟ ಇಂದು ಕನ್ನಡ ರಂಗಭೂಮಿಯ ಒಂದು ಅವಿಭಾಜ್ಯ ಅಂಗವಾಗಿದೆ. ಸಾಹಿತಿಯೂ ಆಗಿದ್ದ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ೨೦೦೫ ಜುಲೈ ೧೬ ರಂದು ಹೃದಯಾಘಾತದಿಂದ ನಿಧನರಾದರು. ಅಕ್ಷರ ಪ್ರಕಾಶನವನ್ನು ಕೆ.ವಿ.ಸುಬ್ಬಣ್ಣನವರು ಹೆಗ್ಗೋಡುವಿನಲ್ಲಿ ಸ್ಥಾಪಿಸಿದರು. ಕೃತಿಗಳು
ನಾಟಕಗಳು
ಸುಬ್ಬಣ್ಣ ನಾಟಕಕಾರ ಮಾತ್ರವಲ್ಲದೆ ಅನುವಾದಕ,ಉತ್ತಮ ವಿಮರ್ಶಕ ಹಾಗೂ ಪ್ರಕಾಶಕ ಕೂಡಾ ಆಗಿದ್ದರು.ಚಲನಚಿತ್ರಕ್ಕೆ ಸಂಬಂಧಿಸಿದಂತೆ ೨೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.ತಮ್ಮ ಅಕ್ಷರ ಪ್ರಕಾಶನದ ಮೂಲಕ ೫೦೦ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಸಂದ ಪ್ರಶಸ್ತಿಗಳು
ಸುಬ್ಬಣ್ಣ ಅವರ ಕವಿರಾಜಮಾರ್ಗ ಮತ್ತು ಕನ್ನಡ ಜಗತ್ತು ಕೃತಿಯಲ್ಲಿ ಕನ್ನಡದ ಸಂದರ್ಭದ ಬಗ್ಗೆ ಅಚ್ಚರಿಗೊಳಿಸುವ ವಿವರಗಳಿವೆ. ಅಲ್ಲಿ ಅವರು ಕನ್ನಡ ಜನಪದದ ಶಕ್ತಿಯ ಕುರಿತು ಬರೆದಿದ್ದಾರೆ. ಅತ್ಯಂತ ಮಹತ್ವದ ಕೃತಿ ಇದು. ಪ್ರತಿ ವರ್ಷ ಅವರು ನಡೆಸುತ್ತಿದ್ದ(ಈಗಲೂ ಮುಂದುವರೆಯುತ್ತಿರುವ) " ಸಂಸ್ಕ್ರತಿ ಶಿಬಿರ"ದಲ್ಲಿ ಎಲ್ಲ ಬಗೆಯ ಚಿಂತನೆಗಳಿಗೆ ವೇದಿಕೆಯನ್ನೊದಗಿಸಿ ಕರ್ನಾಟಕದೆಲ್ಲಡೆಯಿಂದ ಬಂದ ಶಿಬಿರಾರ್ಥಿಗಳಿಗೆ ಆ ಮಂಥನದ ಕೆನೆವಾಲನ್ನು ಉಣಬಡಿಸುವ ಕೆಲಸವನ್ನು ಸಾರ್ಥಕವಾಗಿ ನಡೆಸಿಕೊಂಡು ಬಂದು ಅಲ್ಲಿ ಅಲ್ಲದೇ ಬೇರೆಲ್ಲಿ ಲಭ್ಯ ಆಗಲಾರದಂಥ ಚಿಂತಕರ ನೇರ ಸಂಪರ್ಕವನ್ನು ಕನ್ನಡದ ಕಾಲೇಜಿನ ಮಕ್ಕಳಿಗೆ ಮಾಡಿಸಿದ್ದಾರೆ. ಮೂಲ: ವಿಕಿಪೀಡಿಯ |
About >